Join The Telegram | Join The WhatsApp |
ಬೆಂಗಳೂರು:
ಕ್ಯಾನ್ಸರ್’ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಇಬ್ಬರು ಪುಟಾಣಿ ಮಕ್ಕಳಿಗೆ ವಿಷ ಉಣಿಸಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ದಾರುಣ ಘಟನೆ ಬೆಂಗಳೂರಿನ ಕೋಣನಕುಂಟೆ ಎಂಬಲ್ಲಿ ನಡೆದಿದೆ.
ನಾಗೇಂದ್ರ ಕೃತ್ಯವೆಸಗಿದಾಗ. ಆತನ ಪತ್ನಿ ವಿಜಯಾ (28), ಪುಟ್ಟ ಮಕ್ಕಳಾದ ನಿಷಾ (7), ದೀಕ್ಷಾ (5) ಮೃತಪಟ್ಟಿದ್ದಾರೆ.
ನಾಗೇಂದ್ರ ಊಟದಲ್ಲಿ ವಿಷ ಬೆರೆಸಿ ಹೆಂಡತಿ ಮತ್ತು ಮಕ್ಕಳನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿ, ಮಕ್ಕಳು ಮೃತಪಟ್ಟ ಬಳಿಕ ನಾಗೇಂದ್ರ ತಾನು ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಾಗೇಂದ್ರ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಿನ್ನೆ ಘಟನೆ ನಡೆದಿದ್ದರೂ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.
ನಾಗೇಂದ್ರ ಕಳೆದ ಕೆಲವು ಸಮಯದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ. ಆತ ಕೆಲಸಕ್ಕೆ ಹೋಗುತ್ತಿರಲಿಲ್ಲ. ಹೆಂಡತಿ ವಿಜಯ ಅವರ ಕೆಲಸದಿಂದ ಜೀವನ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join The Telegram | Join The WhatsApp |