Join The Telegram | Join The WhatsApp |
ಬೆಂಗಳೂರು-
ಜೆಡಿಎಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಡಿಸೆಂಬರ್ 19ಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಬಿಡುಗಡೆ ಮಾಡಲಾಗುವುದು. ಪಕ್ಷದ ಕೇಂದ್ರ ಕಛೇರಿ ಜೆಪಿ ಭವನದಲ್ಲಿ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ಕನಕಪುರದಲ್ಲಿ ತಿಳಿಸಿದರು.
ಕನಕಪುರದ ಟಿ.ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಮೂರನೇ ದಿನದ ಪಂಚರತ್ನ ರಥಯಾತ್ರೆ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಶ್ರೀವಾಸ ಕಲ್ಯಾಣ ಕಾರ್ಯಕ್ರಮದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಾಗಿತ್ತು. ಆದರೆ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜಕೀಯ ಬೇಡ ಎಂದು ನಿರ್ಧಾರ ಮಾಡಿದೆ. ಹಾಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ ಜೆಪಿ ಭವನದಲ್ಲಿ ಬಿಡುಗಡೆ ಮಾಡುತ್ತೇವೆ ಎಂದರು.
Join The Telegram | Join The WhatsApp |