ತುಮಕೂರು:
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿ ಡಿಕ್ಕಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿಯೇ ಅಪಾಯದಿಂದ ಪಾರಾಗಿದ್ದಾರೆ.

ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಸಚಿವ ಮಧು ಬಂಗಾರಪ್ಪ ಅವರ ಕಾರಿಗೆ ಲಾರಿಯ ಮುಂಭಾಗ ತೀವ್ರವಾಗಿ ಉಜ್ಜಿಕೊಂಡಿದೆ.

ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ನಂತರ ಬೇರೆ ಕಾರಿನಲ್ಲಿ ಸಚಿವ ಮಧು ಬಂಗಾರಪ್ಪ ಬೆಂಗಳೂರಿಗೆ ತೆರಳಿದ್ದಾರೆ.