ಅಂಕೋಲಾ: ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಕೊನೆಗೂ ಗುಡ್ಡದ ಮುಂಭಾಗದಲ್ಲಿರುವ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಟ್ವಿಟ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಟ್ರಕ್ ಚಾಲಕ ಅರ್ಜುನ್ ಟ್ರಕ್ಕಿನಲ್ಲಿ ಸಿಲುಕಿಕೊಂಡಿದ್ದಾರಾ ಅಥವಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರಾ ಎಂಬ ಮಾಹಿತಿ ತಿಳಿದು ಬಂದಿಲ್ಲ. ಸದ್ಯಕ್ಕೆ ಟ್ರಕ್ ಮೇಲಕ್ಕೆ ಎತ್ತುವ ಕಾರ್ಯಾಚರಣೆ ನಡೆದಿದೆ.