ಬೆಂಗಳೂರು : ಧಾರವಾಡ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರ ಮಗ ಹೇಮಂತ್( 19) ಇಂದು ಬೆಳಗ್ಗೆ 5:00 ರ ಸುಮಾರಿಗೆ ಬೆಳ್ಳಂದೂರು ಸಂಚಾರ ಠಾಣೆ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ಬೈಕಿನಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಬೈಕ್ ಉರುಳಿ ಕಾಲಿಗೆ ಪೆಟ್ಟಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಕ್ಕೆ ಅಪಾಯ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.