ಬೆಂಗಳೂರು : ಕರ್ನಾಟಕದ ಪ್ರತಿ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಮುಜರಾಯಿ ನಡೆಸಿದೆ. ಆ ಮೂಲಕ ರಾಜ್ಯದ ಜನರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ನೀಡಿದೆ. ಈ ಕುರಿತಾಗಿ ಮುಜುರಾಯಿ ಸಚಿವರ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದು ಮುಜರಾಯಿ ಇಲಾಖೆ ಆಯುಕ್ತ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಸದ್ಯ ಮುಜರಾಯಿ ಇಲಾಖೆ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಜನರಿಗೆ ಸಹಿ ನೀಡಲು ಹಲವಾರು ಪ್ಲಾನ್ ಮಾಡಿಕೊಳ್ಳುತ್ತಿದೆ. ಈಗಾಗಲೇ ಆನ್ ಲೈನ್ ಸೇವೆ, ಬುಕ್ಕಿಂಗ್ ಅಂತಾ ಜಾರಿ ಆಗಿದೆ. ಈಗ ಮತ್ತೊಂದು ಹೊಸ ಯೋಜನೆ ಜಾರಿಗೆ ಪ್ಲಾನ್ ಮಾಡಲಾಗುತ್ತಿದೆ. ಇನ್ನು ಈ ಹೊಸ ಯೋಜನೆಯಿಂದ ಮನೆಯಲ್ಲೇ ಕುಳಿತು ಪ್ರಸಿದ್ದ ದೇವಾಲಯಗಳ ಪ್ರಸಾದವನ್ನು ಸ್ವೀಕರಿಬಹುದಾಗಿದೆ.

ಕರ್ನಾಟಕ ರಾಜ್ಯ ವ್ಯಾಪಿ ಇರುವ ಯಾವುದೇ ದೇವಸ್ಥಾನ ಪ್ರಸಾದವನ್ನ ಆನ್ ಲೈನ್‌ಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಪ್ರಸಾದ ತಂದು ಕೊಡುವ ಯೋಜನೆ ಶೀಘ್ರವೇ ಜಾರಿಗೆ ತರಲು ಚಿಂತನೆ ನಡೆದಿದೆ. ಈ ಕುರಿತಾಗಿ ಅಂಚೆ ಇಲಾಖೆ ಮತ್ತು ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದೆ. ಪ್ರಸಾದಕ್ಕೆ ಎಷ್ಟು ದರ ಇದೆಯೋ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರವನ್ನು ನಿಗದಿ ಮಾಡಲಾಗುತ್ತಿದೆ.

ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳ 73% ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂದು ಇತ್ತೀಚೆಗೆ ಆದೇಶ ಹೊರಡಿಸಲಾಗಿತ್ತು. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿತ್ತು.