ಮೈಸೂರು: ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ ಕೊಲೆಯಾಗಿದೆ. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು.
ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿದೆ. ರವಿ (60) ಎಂಬಾತನಿಂದ ಈ ಕೃತ್ಯ ನಡೆದಿದೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.