ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.
ಬೆಂಗಳೂರು:ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ ಅಹಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಆಗ ಮುಖ್ಯಮಂತ್ರಿ ಆಗಿದ್ದ ಬಸವರಾಜ ಬೊಮ್ಮಾಯಿ ಅವರ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಸಲ ಕಾಂಗ್ರೆಸ್ ಟಿಕೆಟ್ ಗೆ ಯಾಸಿರ್ ಶತಪ್ರಯತ್ನ ಮಾಡಿದ್ದರು. ಕೊನೆಗೂ ಅಳೆದು ತೂಗಿರುವ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಮತ್ತೆ ಟಿಕೆಟ್ ನೀಡಿದೆ. ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಬಾರಿ ಒತ್ತಡ ಬಂದಿದ್ದವು. ಈ ಹಿನ್ನಲೆಯಲ್ಲಿ ಈ ಸಲದ ಉಪಚುನಾವಣೆಯಲ್ಲೂ ಯಾಸಿರ್ ಅಹ್ಮದ್ ಖಾನ್ ಪಠಾಣ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾನಗಲ್ ತಾಲೂಕು ಬೊಮ್ಮನಹಳ್ಳಿ ಗ್ರಾಮದ ಅವರು ಶಿಗ್ಗಾವಿ ಮತಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಿದ್ದರು. ಕಾಂಗ್ರೆಸ್ ಟಿಕೆಟ್ ಗೆ ಪೈಪೋಟಿ ನಡೆಸಿ ಕೊನೆಗೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿಗ್ಗಾವಿ ಮತಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಮತದಾರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿದೆ.
ಟಿಕೆಟ್‌ಗಾಗಿ ಕಾಂಗ್ರೆಸ್ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬಲವಾದ ಒತ್ತಾಯ ಕೇಳಿಬಂದಿತ್ತು.
ಅಲ್ಪಸಂಖ್ಯಾ ಸಮುದಾಯದಲ್ಲಿಯೂ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆದಿತ್ತು. ಮಾಜಿ ಶಾಸಕ ಅಜ್ಜಂಪೀಋ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ನಡುವೆ ಪೈಪೋಟಿ ಇತ್ತು. ಮತ್ತೊಂದೆಡೆ ಲಿಂಗಾಯತ ಸಮುದಾಯದಿಂದ ಸಂಜೀವ್ ನೀರಲಗಿ , ಸೋಮಣ್ಣ ಬೇವಿನಮರ ಅವರು ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದರು. ಅಂತಿಮವಾಗಿ ಹೈಕಮಾಂಡ್ ಯಾಸೀರ್ ಖಾನ್ ಪಠಾಣ್ ಅವರಿಗೆ ಮತ್ತೆ ಮಣೆ ಹಾಕಿದೆ.ಆದರೆ ಇಲ್ಲಿ ಅಲ್ಪಸಂಖ್ಯಾತ ನಾಯಕರು ಬಂಡಾಯ ಏಳುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದರೂ, ಶಿಗ್ಗಾವಿಗೆ ಹೆಸರು ಘೋಷಣೆ ಮಾಡಲು ವಿಳಂಬ ಮಾಡಿದ್ದರು.
ಯಾಸಿರ್ ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಸುಪುತ್ರ ಭರತ್ ಸ್ಪರ್ಧೆ ನಡೆಸುತ್ತಿದ್ದು ಈ ಸಲ ಪೈಪೋಟಿ ನಡೆಯುವ ಸಾಧ್ಯತೆ ಇದೆ.