ಬೆಳಗಾವಿ :
ಬೆಳಗಾವಿಯ ಸರ್ದಾರ್ಸ್ ಪ್ರೌಢಶಾಲೆ ಬಳಿ ಸೋಮವಾರ ಬೆಳಗ್ಗೆ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದು ಯುವಕ ಮೃತಪಟ್ಟ ಘಟನೆ ನಡೆದಿದೆ.

ಮಚ್ಛೆ ಗ್ರಾಮದ ಪಂಕಜ್ (24) ಎಂಬ ಯುವಕ ದ್ವಿಚಕ್ರ ವಾಹನ ಚಲಾಯಿಸುವ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಆತನ ತಲೆಗೆ ತೀವ್ರ ಪೆಟ್ಟು ತಗುಲಿ ರಕ್ತಸ್ರಾವಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೊಬ್ಬ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.