ಬೆಳಗಾವಿ : ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ದೇಶದ ಧ್ವಜವನ್ನು ಹಿಡಿದು ಕೆಲ ಯುವಕರು ಕುಣಿದು ಕುಪ್ಪಳಿಸಿರುವ ಘಟನೆ ಚಿಕ್ಕೋಡಿಯಲ್ಲಿ ವರದಿಯಾಗಿದೆ.

ಚಿಕ್ಕೋಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಧ್ವಜ ಹಿಡಿದು ಕೆಲ ಯುವಕರು ಡ್ಯಾನ್ಸ್ ಮಾಡಿದ್ದಾರೆ ಎನ್ನಲಾದ ವಿಡಿಯೋ ಒಂದು ವೈರಲ್ ಆಗಿದ್ದು, ಇದಕ್ಕೆ ಆಕ್ರೋಶ ವ್ಯಕ್ತವಾಗತೊಡಗಿದೆ.

ಹಬ್ಬದ ಸಂದರ್ಭದಲ್ಲಿ ಪ್ಯಾಲೆಸ್ಟೈನ್ ಧ್ವಜ ಹಾರಿಸಿದ್ದಾರೆ. ಸುಮಾರು 6 ಅಡಿ ಎತ್ತರ ಉದ್ದವಿರುವ ಧ್ವಜ ಹಾರಿಸಿ ಪ್ರದರ್ಶನ ಮಾಡಿದ್ದಾರೆ.

ಚಿಕ್ಕೋಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಕೈಯಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದೆ.

ಗಣೇಶೋತ್ಸವ ವಿಸರ್ಜನೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಮೆರವಣಿಗೆಯಲ್ಲಿ ಯುವಕರಿಂದ ಪೊಲೀಸರು ಧ್ಚಜ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಯುವಕರು ಚಿಕ್ಕೋಡಿ ಮುಖ್ಯ ರಸ್ತೆಯ ಮೆರವಣಿಗೆಯಲ್ಲಿ ಸಾಗುವಾಗ ಪ್ಯಾಲೆಸ್ಟೈನ್ ದೇಶದ ಧ್ವಜವನ್ನು ಹಾರಿಸುತ್ತ ಹೋಗಿದ್ದರು.

ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.