ಬೆಂಗಳೂರು :
ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ ಎಂದು ಒತ್ತಾಯಿಸಿ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಗ್ಗೆ ಒಬ್ಬಂಟಿಯಾಗಿ ಪ್ರತಿಭಟನೆ ನಡೆಸಿದ್ದ ಕಾರ್ಕಳ ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನನ್ನನ್ನೂ ಬಂಧಿಸಿ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿ ರಾಜ್ಯ ಸರಕಾರ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಪತ್ರಕರ್ತರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ ಎಂದು ಕಿಡಿಕಾರಿದರು.