ಹೊನ್ನಾವರ : ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್​ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು ದಂಡ ಹಾಕಿರುವ ವಿಲಕ್ಷಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಮರಳು ತುಂಬಿದ ಟಿಪ್ಪರ್ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಬಳಿ ತಡೆದು ಲಾರಿ ಚಾಲಕನಿಗೆ 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ರಶೀದಿಯನ್ನು ನೋಡಿದ ಚಾಲಕ ಶಾಕ್ ಆಗಿದ್ದಾರೆ. ಯಾಕೆಂದರೆ ರಶೀದಿಯಲ್ಲಿ ಹಾಕಿರುವ ದಂಡ ಹೆಲ್ಮೆಟ್‌ ಧರಿಸಿದ ಕಾರಣಕ್ಕೆ ಎಂದು ಇತ್ತು. ಈ ಬಗ್ಗೆ ಚಾಲಕ ಚಂದ್ರಕಾಂತ್, ಸರ್ ನಾನು ಬೈಕ್ ಓಡಿಸುತ್ತಿಲ್ಲ. ಟಿಪ್ಪರ್​ ಚಾಲನೆ ಮಾಡುತ್ತೇನೆ ಎಂದರೂ ಹೇಳಿದರೂ ಆತನಿಗೆ ಹೆಲ್ಮೆಟ್‌ ಧರಿಸಿಲ್ಲ ಎಂದು ದಂಡಹಾಕಿದ್ದಾರೆ ಎನ್ನಲಾಗಿದೆ. ಪೊಲೀಸರು ಸಮವಸ್ತ್ರ ಧರಿಸದೇ ಇದ್ದುದಕ್ಕೆ ದಂಡ ಹಾಕುವ ಬದಲು ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ. ಈ ದಂಡದ ರಸೀದಿ ಎಲ್ಲೆಡೆ ವೈರಲ್ ಆಗುತ್ತಿದೆ.