ಬೆಳಗಾವಿ : ಚಿಕ್ಕೋಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವುದಲ್ಲದೇ ಅಶ್ಲೀಲ ಚಿತ್ರ ತೋರಿಸಿರುವ ಆರೋಪದ ಮೇರೆಗೆ ಇದೀಗ ಚಿಕ್ಕೋಡಿ ಪೊಲೀಸರು ಆ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದರಿಂದಾಗಿ ವಿದ್ಯಾರ್ಥಿನಿ ಅಳುತ್ತ ಮನೆಗೆ ಹೋದಾಗ ಬಾಲಕಿಯ ಪೋಷಕರು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರಣೆ ನಡೆಸಿದಾಗ ಸುಮಾರು ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಶಿಕ್ಷಕ ಲೈಂಗಿಕವಾಗಿ ಕಿರುಕುಳ ನೀಡಿರುವ ಮಾಹಿತಿ ಜಾಹೀರಾಗಿದೆ. ಪೊಲೀಸರು ಈ ಶಿಕ್ಷಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.