ಬೆಳಗಾವಿ : ಅರಳಿದ ಗಿಡದಲ್ಲಿ ಮೊಗ್ಗಿನ ಸಂಖ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎನ್ನುವ ಮೂಲಕ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇನ್ನು 10 ಸ್ಥಾನಗಳನ್ನು ಹೆಚ್ಚಾಗಿ ಪಡೆಯಲಿದೆ ಎಂದು ರಾಯಬಾಗ ತಾಲೂಕು ಮೇಖಳಿ ಗ್ರಾಮದ ಶ್ರೀ ರಾಮರಾಜ್ಯ ಸರ್ವಸಿದ್ದಿ ಶಕ್ತಿ ಪೀಠದ ಪೀಠಾಧಿಪತಿ ಶ್ರೀ ಲೋಕನಾಥ ಸ್ವಾಮೀಜಿ ಇದೀಗ ಭವಿಷ್ಯ ನುಡಿದಿದ್ದಾರೆ. ಜೊತೆಗೆ ಕರ್ನಾಟಕ ರಾಜಕಾರಣದ ಕುರಿತು ಭವಿಷ್ಯ ನುಡಿದಿರುವ ಅವರು, ದೊರೆಯ ಸಿಂಹಾಸನಕ್ಕೆ ತೊಂದರೆ ಉಂಟಾಗಬಹುದು ಎನ್ನುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಬಹುದು ಎಂಬ ಮುನ್ಸೂಚನೆಯನ್ನು ರವಾನಿಸಿದ್ದಾರೆ.