ಮಂಗಳೂರು: ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಕಾಣಿಕೆ ಹುಂಡಿಯನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿದ್ದಾನೆ.

ಮಂಗಳೂರು ನಗರದ ಮೇರಿಹಿಲ್‍ನ ಕೊರಗಜ್ಜನ ಕಟ್ಟೆಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳತನಕ್ಕೂ ಮುನ್ನ ಕೊರಗಜ್ಜನಿಗೆ ಭಕ್ತಿಯಿಂದ ನಮಸ್ಕರಿಸಿದ್ದಾನೆ. ಅಲ್ಲದೇ ಕಟ್ಟೆಗೆ ಮೂರು ಸುತ್ತು ಸುತ್ತಿದ್ದಾನೆ. ಬಳಿಕ ಕಾಣಿಕೆ ಹುಂಡಿಯನ್ನು ಹೊತ್ತೊಯ್ದಿದ್ದಾನೆ. ಈ ದೃಶ್ಯ ಈಗ ಸಿಸಿಟಿವಿಯಲ್ಲಿ ಸೆರೆಯಾಗಿದೆ.