ಬೆಳಗಾವಿ: ಬೆಳಗಾವಿ ಪ್ರತಿಷ್ಠಿತ ಬುಡಾ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಲಕ್ಷ್ಮಣ್ ರಾವ್ ಚಿಂಗಳೆ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಅಧಿಕೃತವಾಗಿ ನೇಮಕಾತಿ ಪತ್ರಕ್ಕೆ ಸಹಿ ಹಾಕಿದ್ದು ಲಕ್ಷ್ಮಣ್ ರಾವ್ ಚಿಂಗಳೆ ಅವರು ಶನಿವಾರ ಬೆಳಗ್ಗೆ 10 ಗಂಟೆಗೆ ಬುಡಾ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.