Join The Telegram | Join The WhatsApp |
ಬೆಂಗಳೂರು-
ಮದ್ಯ ಖರೀದಿಗಿರುವ ವಯಸ್ಸಿನ ನಿರ್ಬಂಧವನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಿ ವಯಸ್ಸಿನ ಮಿತಿಯನ್ನು 18 ವರ್ಷಗಳಿಗೆ ಇಳಿಕೆ ಮಾಡಲು ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ಕ್ಕೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದೆ.ಕರ್ನಾಟಕ ಅಬಕಾರಿ (ಪರವಾನಿಗೆಯ ಸಾಮಾನ್ಯ ಷರತ್ತು) (ತಿದ್ದುಪಡಿ) ನಿಯಮ 2023 ತರಲು ಮುಂದಾಗಿರುವ ಸರ್ಕಾರ ಈ ಸಂಬಂಧ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬುದನ್ನು ಸೇರಿಸುವ ಪ್ರಸ್ತಾವ ಇದೆ.ಈ ಸಂಬಂಧ ಸಾರ್ವಜನಿಕರು ಆಕ್ಷೇಪ ಸಲ್ಲಿಸಲು 30 ದಿನಗಳ ಸಮಯಾವಕಾಶ ನೀಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳ ಅಂಚಿನಿಂದ 500 ಮೀಟರ್‌ವರೆಗಿನ ಪ್ರದೇಶದಲ್ಲಿ ಹೊಸ ಮದ್ಯದಂಗಡಿ ತೆರೆಯುವುದನ್ನು ನಿರ್ಬಂಧಿಸಿರುವುದನ್ನು ಅಬಕಾರಿ ನಿಯಮಗಳ ವ್ಯಾಪ್ತಿಗೆ ತರಲಾಗುತ್ತಿದೆ.
Join The Telegram | Join The WhatsApp |