Join The Telegram | Join The WhatsApp |
ಬೆಂಗಳೂರು-
ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಮೊಲ್ಯಾಸಿಸ್‌ನಿಂದ ಬರುವ ಲಾಭಾಂಶದಲ್ಲಿ ರೈತರಿಗೆ ಪ್ರತಿ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಿದೆ. ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 2023ರ ಹೊಸವರ್ಷಕ್ಕೆ ವಿಶೇಷ ಕೊಡುಗೆ ನೀಡಿದೆ ಎನ್ನಬಹುದು. ಈ ಹಿಂದೆ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂ.ಗಳಂತೆ ಒಟ್ಟು ಎಥೆನಾಲ್‌ನಿಂದ 204 ಕೋಟಿ ರೂ.ಹಣವನ್ನು ಬೆಳಗಾರರಿಗೇ ನೀಡಲು ಸರ್ಕಾರ ಆದೇಶಿಸಿತ್ತು.
ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂ.ಗಳಂತೆ ಒಟ್ಟು ಎಥೆನಾಲ್‌ನಿಂದ 204 ಕೋಟಿ ರೂ. ಪಾವತಿಸಲು ಈ ಹಿಂದೆ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಕಬ್ಬು ಬೆಳೆಗಾರರಿಗೆ (Sugarcane Farmers) ಬೊಮ್ಮಾಯಿ ಸರ್ಕಾರ ಇದೀಗ ಮತ್ತೊಂದು ಬಂಪರ್ ಕೊಡುಗೆ ಘೋಷಿಸಿದ್ದು, ಮೊಲ್ಯಾಸಿಸ್‌ನಿಂದ ಬರುವ ಲಾಭಾಂಶದಲ್ಲಿ ರೈತರಿಗೆ ಪ್ರತಿ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಿದೆ.
ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರ ಇಂದು(ಡಿಸೆಂಬರ್ 29) ಆದೇಶ ಹೊರಡಿಸಿದೆ. ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್‌ಆರ್‌ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ.
Join The Telegram | Join The WhatsApp |