ಬೆಳಗಾವಿ :
ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಶಕ್ತಿ ದೇವಿಯ ಕೇಂದ್ರವಾಗಿರುವ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಇದುವರೆಗೆ ಮರೀಚಿಕೆಯಾಗಿತ್ತು. ಇದೀಗ ರಾಜ್ಯ ಸರಕಾರ ವಿಶೇಷ ಆಸಕ್ತಿ ವಹಿಸಿ ದೇವಸ್ಥಾನದ ರಕ್ಷಣೆ, ಅಭಿವೃದ್ಧಿಗೆ ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ಕ್ಷೇತ್ರದ ಎಲ್ಲ ದೇವಸ್ಥಾನಗಳು, ಪುರಾತತ್ವ ಅವಶೇಷಗಳು ಮತ್ತು ನೈಸರ್ಗಿಕ ಪರಿಸರ ಉಳಿಸಲು ಹಾಗೂ ಅದರ ಸಾಂಸ್ಕೃತಿಕ ಪರಂಪರೆ ಸಂರಕ್ಷಿಸಲು, ಸುಸ್ಥಿರ ಅಭಿವೃದ್ಧಿ ಖಾತ್ರಿ ಪಡಿಸಲು ಪ್ರವಾಸೋದ್ಯಮ ಇಲಾಖೆ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ ಮಂಡಿಸಲಾಗಿದೆ. ಯಲ್ಲಮ್ಮ ಕ್ಷೇತ್ರವನ್ನು ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಈ ವಿಧೇಯಕ ಪೂರಕವಾಗಲಿದೆ.