Join The Telegram | Join The WhatsApp |
ಹೊಸದಿಲ್ಲಿ:
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಪರ್ಯಾಯ ವ್ಯವಸ್ಥೆ ಮೂಲಕ (ಲ್ಯಾಟರಲ್ ಎಂಟ್ರಿ) ನೇಮಕಾತಿ ಮಾಡಿಕೊಳ್ಳಲು ಅರ್ಹರ ಕೊರತೆ ಇರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ದೇಶದಾದ್ಯಂತ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಪರ್ಯಾಯ ವ್ಯವಸ್ಥೆ ಮೂಲಕ (ಲ್ಯಾಟರಲ್ ಎಂಟ್ರಿ) ನೇಮಕಾತಿ ಮಾಡಿಕೊಳ್ಳುವುದಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಅರ್ಹ ವಕೀಲರು ಲಭ್ಯವಾಗುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕನಿಷ್ಠ ಏಳು ವರ್ಷಗಳ ಅನುಭವ ಹೊಂದಿರುವ ವಕೀಲರು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಉನ್ನತ ನ್ಯಾಯಾಂಗ ಸೇವೆಗಳಿಗೆ ಲ್ಯಾಟರಲ್‌ಗೆ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಬಹುದು.
ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ ಉನ್ನತ ನ್ಯಾಯಾಂಗ ಸೇವೆಗಳ (ಎಚ್‌ಜೆಎಸ್) ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳ ಅರ್ಜಿಯ ವಿಚಾರಣೆ ನಡೆಸಿತು. ಅರ್ಜಿ ಪುರಸ್ಕರಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಜೆ. ಬಿ. ಪಾರ್ದಿವಾಲಾ ಪೀಠ, ‘ರಾಜಸ್ಥಾನ ಹೈಕೋರ್ಟ್‌ಗೆ ತೆರಳಲು ಅರ್ಜಿದಾರರಿಗೆ ಮುಕ್ತ ಅವಕಾಶ ನೀಡುತ್ತೇವೆ. ಅಂತಹ ಅರ್ಜಿ ಸಲ್ಲಿಸಿದರೆ ಪೀಠ ರಚಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೋರುತ್ತೇವೆ’ ಎಂದು ಹೇಳಿದೆ.
Join The Telegram | Join The WhatsApp |