ಬೆಂಗಳೂರು : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದ್ದು, ಇಂದು ಕಲಬುರಗಿಯಲ್ಲಿ ದಾಖಲೆಯ ಪ್ರಮಾಣದ ತಾಪಮಾನ ದಾಖಲಾಗಿದೆ.

ಜಿಲ್ಲೆಯ ಕಾಳಗಿ ತಾಲೂಕಿನ ಹೋಬಳಿಯಲ್ಲಿ ಗರಿಷ್ಠ 47.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಬಿಸಿಲಿನಿಂದ
ರಕ್ಷಣೆ ಪಡೆಯಲು ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯದ ಐದು ಜಿಲ್ಲೆಗಳಲ್ಲಿ ಅತೀ ಹೆಚ್ಚು ಉಷ್ಣಾಂಶ ಮಂಗಳವಾರ (ಏಪ್ರಿಲ್‌ 30) ದಾಖಲಾಗಿದೆ.

ಬಾಗಲಕೋಟೆ ಜಿಲ್ಲೆಯ ಕರಡಿ 45.3, ರಾಯಚೂರು ಜಿಲ್ಲೆಯ ಗಿಲ್ಲೆಸೂಗೂರಿನಲ್ಲಿ 45.2, ಯಾದಗಿರಿ ಜಿಲ್ಲೆಯ ಗೋಗಿಯಲ್ಲಿ 45.1 ಮತ್ತು ವಿಜಯಪುರ ಜಿಲ್ಲೆಯ ನಾಲತವಾಡದಲ್ಲಿ 45 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.