ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ಸತೀಶ್ ಬೂಡುಮಕ್ಕಿ ಅವರು ನಾಮಪತ್ರ ಹಿಂಪಡೆದು ಕೊಂಡಿದ್ದಾರೆ. ಇದರೊಂದಿಗೆ ಅಂತಿಮವಾಗಿ 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕದ ಅಭ.ರ್ಥಿ ಪದರಾಜ್ ಆರ್.
ಪೂಜಾರಿ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ,
ಕರುನಾಡ ಸೇವಕರ ಪಕ್ಷದ ಅಭ್ಯರ್ಥಿ ದುರ್ಗಾ ಪ್ರಸಾದ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪ್ರಜಾಕೀಯ ಮನೋಹರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ರಂಜಿನಿ ಎಂ. ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ದೀಪಕ್ ರಾಜೇಶ್ ಕುವೆಲ್ಲೊ, ಮೆಕ್ಕಿಂ ಪಿಂಟೊ ಹಾಗೂ ಸುಪ್ರೀತ್ ಕುಮಾರ್‌ ಪೂಜಾರಿ ಅವರು ಅಂತಿಮವಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ಉಳಿದ ಅಭ್ಯರ್ಥಿಗಳಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲೆ ಮುಗಿಲನ್ ಎಂ.ಪಿ. ತಿಳಿಸಿದಾರೆ.