ಮಂಡ್ಯ (ಕೆ.ಆರ್.ಪೇಟೆ) : ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.
ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.
*ನಾನು ಹೇಳಿದ್ನಾ?*
ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.
ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು.
ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
*GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಸಿ.ಎಂ.ಸಿದ್ದರಾಮಯ್ಯ*
*ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು: ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು: ಸಿ.ಎಂ*
*ನಾನು ಬಡತನ ರೇಖೆಗಿಂತ ಕೆಳಗಿಲ್ಲ: ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು: ಸಿ.ಎಂ*
*ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ: ಸಿಎಂ*
*ಬಡ ಕುಟುಂಬಗಳ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸಿದ್ದೇವೆ: ಸಿ.ಎಂ*
ಕೆ.ಆರ್.ಪೇಟೆ ಡಿ 4: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.
ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.
GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.
ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ ರೈತರಿಗೂ ಸಿಗಬೇಕು.
ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.
ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.
ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.
ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು.
ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.
*ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ*
ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ ಎಂದು ಭರವಸೆ ನೀಡಿದರು.
*ದಿನಕ್ಕೆ 5 ಕೋಟಿ ಹಾಲು ಉತ್ಪಾದಕರಿಗೆ ಕೊಡ್ತಾ ಇದ್ದೀವಿ*
ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.
*ಬಾಕ್ಸ್*
ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ ಎಂದು ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು.