ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎ ವಿ ಬಾಳಿಗ ಹಾಸ್ಪಿಟಲ್ ಉಡುಪಿಯ ಸೌಜನ್ಯ ಶೆಟ್ಟಿ ಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಈ ಪ್ರಪಂಚದಲ್ಲಿ ನೂರಕ್ಕೆ ನೂರು ಶೇಕಡ ಪರಿಪೂರ್ಣನಾದ ವ್ಯಕ್ತಿಗಳು ಯಾರು ಇಲ್ಲ. ಆ ಕೊರತೆಯನ್ನು ಮೆಟ್ಟಿ ಮುನ್ನುಗ್ಗಬೇಕೆ ಹೊರತು ಬೇರೆ ಬೇರೆ ಕಾರಣಗಳಿಗೆ ಕೀಳರಿಮೆಗೆ ಒಳಗಾಗಬಾರದು. ಸಿಕ್ಕಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಪರಿಪೂರ್ಣ ವ್ಯಕ್ತಿಯಾಗಿ ಬೆಳೆಯುವಂತಹ ಪ್ರಯತ್ನ ಮಾಡಬೇಕು. ವಿದ್ಯೆಗಿಂತ ದೊಡ್ಡ ಸಂಪತ್ತು ಈ ಭೂಮಿಯಲ್ಲಿ ಯಾವುದು ಇಲ್ಲ ಎಂದರು.

ವಾಣಿಜ್ಯ ವಿಭಾಗದ ಹಿರಿಯ ಉಪನ್ಯಾಸಕರಾದ ಅನುಸೂಯ ಮಲ್ಯ ಸ್ಮರಣಕ್ಕೆ ನೀಡಿ ಗೌರವಿಸಿದರು.

ಟ್ರಸ್ಟ್ ನ ಸದಸ್ಯ ವಿಷ್ಣುಮೂರ್ತಿ ನಾಯಕ್, ಪ್ರಾಂಶುಪಾಲ ಪ್ರಕಾಶ್ ಜೋಗಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ಉಪನ್ಯಾಸಕರು ಉಪಸ್ಥಿತರಿದ್ದರು. ಆಂಗ್ಲ ಭಾಷೆ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.