ಬೆಂಗಳೂರು : ಲೋಕಸಭಾ ಚುನಾವಣೆಗೆ ಸಂಬಂಧಿಸಿ ಈ ಬಾರಿ ಕರಾವಳಿ ಜಿಲ್ಲೆಗಳಲ್ಲಿ ಬಹು ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾಕಷ್ಟು ವಿರೋಧದ ನಡುವೆಯೂ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ. ಈ ಸಲವು ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದ್ದು ಬಹುತೇಕ ಅವರ ಹೆಸರು ಅಂತಿಮವಾಗಲಿದೆ. ಉಳಿದಂತೆ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಮತ್ತು ಬಿಜೆಪಿ ಮಾಜಿ ಅಧ್ಯಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂಬ ಮಾಹಿತಿ ಬಂದಿದೆ. ಇಲ್ಲಿ ಬಲಿಷ್ಠವಾಗಿರುವ ಬಂಟ ಸಮುದಾಯದ ನಾಯಕರು ಆಗಿರುವ ಕ್ಯಾಪ್ಟನ್ ಬೃಜೇಶ ಚೌಟ ಅವರ ಹೆಸರು ಮುನ್ನೆಲೆಗೆ ಬಂದಿದೆ. ಉತ್ತರ ಕನ್ನಡ ಕ್ಷೇತ್ರದಿಂದ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈ ತಪ್ಪಲಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಅಥವಾ ಹರಿಪ್ರಕಾಶ ಕೋಣೆಮನೆ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ.
ಒಟ್ಟಾರೆ ಬಿಜೆಪಿ ಭದ್ರಕೋಟೆಯಾಗಿ ಗುರುತಿಸಿಕೊಂಡಿರುವ ಕರಾವಳಿಯಲ್ಲಿ ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಹೊಸ ಪ್ರಯೋಗಕ್ಕೆ ಮುಂದಾಗಿರುವುದು ಗಮನಾರ್ಹ ಬೆಳವಣಿಗೆ.