ಬೆಂಗಳೂರು: ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ ಪ್ರವಾಸೋದ್ಯಮ ಬೆಳವಣಿಗೆಗೆ ರಾಜ್ಯ ಪ್ರವಾಸೋದ್ಯಮ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಪರಿಶೀಲನೆ ನಡೆದಿದೆ.
ಗೋವಾ ರೀತಿ ಬೀಚ್ ಗಳಲ್ಲಿ ಟೆಂಟ್ ಹಾಕಿ ಮತ್ತು ಮದ್ಯ ಮಾರಾಟ ಹಾಗೂ ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆ ಪರಿಶೀಲಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಜನರನ್ನು ಅಕರ್ಷಿಸಲು ಹಾಗೂ ಜನ ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲ ಕಿನಾರೆಯಲ್ಲಿ ಅತ್ಯಾಕರ್ಷಕ ಲೈಟ್ ಅಳವಡಿಸಲಾಗುವುದು. ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲ ಬಳಿ ಸರಕಾರಿ ಮತ್ತು ಖಾಸಗಿ ಜಮೀನು ಹುಡುಕುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ರವಾನಿಸಲಾಗಿದೆ. ಈ ಮೂಲಕ ಕರ್ನಾಟಕದ ಕರಾವಳಿಯಲ್ಲಿ ಪ್ರವಾಸೋದ್ಯಮ ಬೆಳೆಸಲು ಸರ್ಕಾರ ಉದ್ದೇಶ ಹೊಂದಿದೆ ಎನ್ನಲಾಗಿದೆ.