ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರಿಗೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಸ್ಥಾನ ನೀಡಲಿ ಎಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಜೋರಾಗಿದೆ.
ಲಿಂಗಾಯತ ನಾಯಕರಾಗಿರುವ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮುಂದಿನ ಮುಖ್ಯಮಂತ್ರಿ ಆಗುವ ಸೂಕ್ತ ವ್ಯಕ್ತಿ. ಅವರನ್ನು ಪಕ್ಷ ಮುಖ್ಯಮಂತ್ರಿ ಮಾಡಬೇಕು ಎಂದು ಇದೀಗ ಲಕ್ಷ್ಮಣ ಸವದಿ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಜೋರು ಪ್ರಚಾರ ನಡೆಸಿದ್ದಾರೆ. ಇದೀಗ ವಿಡಿಯೋ ಮೂಲಕವೂ ಪ್ರಚಾರ ಜೋರಾಗಿದ್ದು ಲಕ್ಷ್ಮಣ ಸವದಿ ಅವರ ರಾಜಕೀಯ ಚತುರತೆ, ಅವರ ಚಾಣಕ್ಯ ತಂತ್ರಗಾರಿಕೆಗೆ ಹಾಗೂ ತೆರೆ ಮರೆಯಲ್ಲಿ ಕೆಲಸ ಮಾಡುವ ಅವರ ನಾಯಕತ್ವ ಗಮನಿಸಿ, ಕಾಂಗ್ರೆಸ್ ಪಕ್ಷ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬೆಂಬಲಿಗರು ಬೇಡಿಕೆ ಇಟ್ಟಿದ್ದಾರೆ.