ಬೆಂಗಳೂರು :
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕುಟುಕಿದರು.

ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯವಾದಿ ಹೋರಾಟ ಮತ್ತು ಚಳವಳಿಯ ಚರಿತ್ರೆಯನ್ನು ಎಳೆ ಎಳೆಯಾಗಿ ವಿವರಿಸಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದವರು, ಹುತಾತ್ಮರಾದವರು, ಬ್ರಿಟಿಷರಿಂದ ಹಿಂಸೆ ಅನುಭವಿಸಿದವರು ಕಾಂಗ್ರೆಸ್ಸಿನವರು. ಬಿಜೆಪಿ ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೇ ಇಲ್ಲ. ಅವರು ದೇಶಕ್ಕಾಗಿ ಹೋರಾಡಿದ ಚರಿತ್ರೆಯೇ ಇಲ್ಲ. ನಮ್ಮ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಈಗ ಇವರು ರಾಷ್ಟ್ರೀಯವಾದಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಭಾರತದ ಇತಿಹಾಸ ಮತ್ತು ಚರಿತ್ರೆಯಲ್ಲಿ ಯಾರು ನಿಜವಾದ ರಾಷ್ಟ್ರೀಯವಾದಿಗಳು ಎನ್ನುವುದು ದಾಖಲಾಗಿದೆ ಎಂದರು.

ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಕಾಂಗ್ರೆಸ್ ನ ದಾಖಲೆ, ಸಾಧನೆಗಳನ್ನು ಮುಖ್ಯಮಂತ್ರಿಗಳು ಪರಿಷತ್ ನಲ್ಲಿ ವಿವರವಾಗಿ ಹೇಳುವಾಗ ಜೆಡಿಎಸ್ ನ ಸದಸ್ಯ ಬೋಜೇಗೌಡರು ಮಧ್ಯ ಪ್ರವೇಶಿಸಿ ಏನನ್ನೋ ಹೇಳಲು ಮುಂದಾದರು.

ಈ ವೇಳೆ ಮುಖ್ಯಮಂತ್ರಿಗಳು ತಮ್ಮ ಮಾಮೂಲು ಹಾಸ್ಯದ ಶೈಲಿಯಲ್ಲಿ “ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ ಎಂದರು.

ಮುಖ್ಯಮಂತ್ರಿಗಳ ಮಾತನ್ನು ಗೌರವದಿಂದ ಸ್ವೀಕರಿಸಿದ ಬೋಜೇಗೌಡರು ಸಿಎಂ ಗೆ ಕೈ ಮುಗಿದು ಕುಳಿತರು.

*ಸಂಪಾದಕೀಯಗಳ ಶ್ಲಾಘನೆ*

ರಾಜ್ಯಪಾಲರ ಭಾಷಣವನ್ನು ಮೆಚ್ಚಿ ವಿಶ್ಲೇಷಣೆ ಮಾಡಿ ಬರೆದ ನಾಡಿದ ಪ್ರಮುಖ ಪತ್ರಿಕೆಗಳ ಸಂಪಾದಕೀಯಗಳು ಮತ್ತು ವರದಿಗಳನ್ನು ಮುಖ್ಯಮಂತ್ರಿಗಳು ಪ್ರಸ್ತಾಪಿಸಿ ರಾಜ್ಯಪಾಲರ ಭಾಷಣವನ್ನು ಸುಳ್ಳು ಎಂದು ಆರೋಪಿಸಿದ್ದ ಬಿಜೆಪಿ-ಜೆಡಿಎಸ್ ಸದಸ್ಯರ ಮಾತಿಗೆ ಕನ್ನಡಿ ಹಿಡಿದರು.

*ನಿಮ್ಮ ದಾಖಲೆ ಮುರಿಯಲು ಯಾರಿಂದಲೂ ಸಾಧ್ಯವಿಲ್ಲ*

ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಭರ್ಜರಿಯಾಗಿ ಜಯಗಳಿಸಿದ ಪುಟ್ಟಣ್ಣ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. 5 ನೇ ಬಾರಿಗೆ ಪುಟ್ಟಣ್ಣ ಪರಿಷತ್ ಪ್ರವೇಶಿಸಿದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, “ಸಭಾಧ್ಯಕ್ಷರೇ ನೀವು ಎಂಟು ಬಾರಿ ಗೆಲುವು ಸಾಧಿಸಿದ್ದೀರಿ. ನಿಮ್ಮ ದಾಖಲೆಯನ್ನು ಸದ್ಯಕ್ಕೆ ಯಾರೂ ಸರಿಗಟ್ಟಲು ಸಾಧ್ಯವಿಲ್ಲ” ಎಂದು ಹೊರಟ್ಟಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

*ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ: ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ:ಸಿ.ಎಂ

JD “S” ಅಲ್ಲ ಈಗ JD “C”..ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು: ಯಾಕ್ರೀ ಇದೆಲ್ಲಾ: ಸಿಎಂ

ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದರು.

ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ಈ ರೀತಿ ಪ್ರಶ್ನಿಸಿದರು.

ಸಂವಿಧಾನ ಜಾರಿಯ ಮುನ್ನಾ ದಿನ ಅಂಬೇಡ್ಕರ್ ಅವರು ಪಾರ್ಲಿಮೆಂಟಿನಲ್ಲಿ ಮಾಡಿದ ಭಾಷಣದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿಗಳು ವಿವರವಾಗಿ ಮಾತನಾಡುತ್ತಿದ್ದರು. ಈ ವೇಳೆ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು ಎನ್ನುವುದನ್ನು ನೆನಪಿಸಿದರು.

ಪ್ರಭಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು.

ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ಸದಸ್ಯ ಬೋಜೇಗೌಡರು ಕುವೆಂಪು ಅವರ ಮಾತನ್ನು ಮುಂದುವರೆಸಿದರು.

ಈ ವೇಳೆ ಮುಖ್ಯಮಂತ್ರಿಗಳು, ” ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದರು. ಜತೆಗೆ ಈಗ ನಿಮ್ಮದು JD “S” ಅಲ್ಲ ಈಗ JD “C” ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು C ಫಾರ್ ಕಮ್ಯುನಲ್ ಎಂದು ಟೇಬಲ್ ಬಡಿದರು.

ಈ ಮಧ್ಯೆ ಬಿಜೆಪಿಯ ರವಿಕುಮಾರ್ ಅವರು ಪರಿಷತ್ ವಿರೋಧ ಪಕ್ಷದ ನಾಯಕ ಪೂಜಾರಿ ಅವರಿಗೆ ಕಿವಿಯಲ್ಲಿ ಏನೋ ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, *ರವಿಕುಮಾರ್ ಅವರೇ RSS ಹೇಳಿಕೊಟ್ಟಿದ್ದನ್ನೆಲ್ಲಾ ನೀವು ಆಮೇಲೆ ಹೇಳಿಕೊಡಿ. ನಾನು ಮಾತು ಮುಗಿಸಲು ಬಿಡಿ* ಎಂದರು.

 

ಭೇಟಿ : ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಮುಖಂಡರುಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.