ಬೆಳಗಾವಿ: ಸ್ವಿಫ್ಟ್‌ ಮತ್ತು ಅಲ್ಟೋ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.
ಭೀಕರ ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ(8), ಗೋಪಾಲ್ ನಾಯಕ(45) ಹಾಗೂ ಧಾರವಾಡ ಮೂಲಕ ಅನ್ನಪೂರ್ಣ(53) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮುರಗೋಡ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.