ಬೆಂಗಳೂರು :
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

16 ಸದಸ್ಯರ ಈ ತಂಡದಲ್ಲಿ ನಾಲ್ವರು ಸ್ಪಿನ್ನರ್ ಗಳಿದ್ದರೆ, ಮೂವರು ವಿಕೆಟ್ ಕೀಪರ್‌ಗಳು ಸ್ಥಾನ ಪಡೆದಿದ್ದಾರೆ. ಇಬ್ಬರಿಗೆ ಚೊಚ್ಚಲ ಅವಕಾಶ ನೀಡಲಾಗಿದೆ. ಇಲ್ಲಿ ಪರಿಪೂರ್ಣ ಸ್ಪಿನ್ನರ್ ಆಗಿ ಕುಲದೀಪ್ ಯಾದವ್ ಸ್ಥಾನ ಪಡೆದರೆ, ಸ್ಪಿನ್ ಆಲ್‌ರೌಂಡರ್‌ಗಳಾಗಿ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

16 ಸದಸ್ಯರ ಈ ಬಳಗದಲ್ಲಿ ಮೂವರು ವಿಕೆಟ್‌ ಕೀಪರ್‌ಗಳನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್. ರಾಹುಲ್, ಕೆ.ಎಸ್. ಭರತ್ ಹಾಗೂ ಧ್ರುವ್ ಜುರೇಲ್ ವಿಕೆಟ್ ಕೀಪರ್-ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್‌ ಧ್ರುವ ಜುರೇಲ್ ಇದೇ ಮೊದಲ ಬಾರಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಉತ್ತರ ಪ್ರದೇಶದ 22 ವರ್ಷದ ಧ್ರುವ ಅವರು ಬ್ಯಾಟಿಂಗ್ ಮತ್ತು ವಿಕೆಟ್ ಕೀಪರ್ ಆಗಿ ಗಮನ ಸೆಳೆದಿದ್ದಾರೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್‌, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್‌ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್‌, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಟ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.