ಬೆಳಗಾವಿ : ಯುವನಿಧಿ ಯೋಜನೆಯಡಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಅರ್ಜಿ ಸಲ್ಲಿಸಿದ್ದು, ಸೇವಾ ಸಿಂಧು ಪೋರ್ಟಲ್‌ನಲ್ಲಿ ಫೆ.29 ರವರೆಗೆ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ ೧೮೦ ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ ೨೦೨೪ ರಂದು ನೇರ ನಗದು ವರ್ಗಾವಣೆ ಮಾಡಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಪಡೆಯಬೇಕಾದರೆ ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲ. ಸ್ವಯಂ ಉದ್ಯೋಗ ಇಲ್ಲ ಎಂದು ಸ್ವಯಂ ಘೋಷಣೆ ಮಾಡಬೇಕಾಗಿರುತ್ತದೆ.
ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು ೨೫ ರೊಳಗೆ ಸ್ವಯಂ ಘೋಷಣೆ ಕಡ್ಡಾಯವಾಗಿ ಮಾಡಬೇಕು. ಘೋಷಣೆ ಮಾಡದೇ ಇರುವ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ವೀಕ್ಷಸಬಹುದು ಅಥವಾ ೦೮೩೧-೨೪೪೩೯೪೮ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.