ದೆಹಲಿ: ಬಿಜೆಪಿ ಇಂದು ಘೋಷಣೆ ಮಾಡಿರುವ ಲೋಕಸಭಾ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಮಾಜಿ ಸಚಿವ ಕೆ ಸುಧಾಕರ್ ಯಶಸ್ವಿಯಾಗಿದ್ದಾರೆ. ಅವರು ಚಿಕ್ಕಬಳ್ಳಾಪುರದಿಂದ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ. ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಉತ್ತರ ಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬೆಳಗಾವಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಲಭಿಸಿದ್ದು ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ಉತ್ತರ ಕನ್ನಡದಿಂದ ಟಿಕೆಟ್ ಪಡೆಯುವಲ್ಲಿ ಈ ಬಾರಿ ವಿಫಲರಾಗಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆ ಮಾಡದಿರುವುದು ಕಂಡುಬಂದಿದೆ.