Join The Telegram | Join The WhatsApp |
ಢಾಕಾ-
ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ತಂಡ ಒಂದು ವಿಕೆಟ್‌ನಿಂದ ಪ್ರವಾಸಿ ಭಾರತ ತಂಡವನ್ನು ಸೋಲಿಸಿತು. ಇದೀಗ ಎರಡನೇ ಪಂದ್ಯವನ್ನು ಗೆದ್ದು ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಬಾಂಗ್ಲಾದೇಶವಿದೆ.
ಭಾರತ ತಂಡವು ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಎರಡನೇ ಪಂದ್ಯದಲ್ಲಿ ಗೆಲುವಿನ ಹಳಿಗೆ ಮರಳಬೇಕಿದೆ.
2ನೇ ಏಕದಿನ ಪಂದ್ಯವು ಢಾಕಾದ ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 11:30 ಗಂಟೆಗೆ ಆರಂಭವಾಗಲಿದೆ.
Join The Telegram | Join The WhatsApp |