ಬೆಂಗಳೂರು: ಇಂದು ದಿವಂಗತ ನಟ ಪುನೀತ್ ರಾಜ್‌ಕುಮಾ‌ರ್ ಅವರ 50ನೇ ಜಯಂತಿ. ಈ ಪ್ರಯುಕ್ತ ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ಅವರ ಸಮಾಧಿಗೆ ಕುಟುಂಬದ ಸದಸ್ಯರಿಂದ ಪೂಜೆ ಸಲ್ಲಿಸಲಾಯಿತು.

ರಾಘವೇಂದ್ರ ರಾಜ್ ಕುಮಾರ್ ದಂಪತಿ, ಅಶ್ವಿನಿ ಪುನೀತ್ ರಾಜ್‌ಕುಮಾ‌ರ್, ಪುತ್ರಿಯರಾದ ಧೃತಿ ಹಾಗೂ ವಂದಿತಾ, ಯುವ ರಾಜ್ ಕುಮಾರ್ ಮತ್ತಿತರು ಭಾಗಿಯಾಗಿದ್ದರು.

ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಸ್ಟುಡಿಯೊಗೆ ಅಭಿಮಾನಿಗಳ ಭೇಟಿ ನೀಡುತ್ತಿದ್ದಾರೆ. ಪುನೀತ್‌ಗೆ ಪುಷ್ಪ ನಮನ ಸಲ್ಲಿಸಿ ಅಗಲಿದ ನೆಚ್ಚಿನ ನಟನ ಗುಣಗಾನ ಮಾಡುತ್ತಿದ್ದಾರೆ.

2021 ಮಾರ್ಚ್ 29 ರಂದು ತೀವ್ರ ಹೃದಯಾಘಾತದಿಂದ ಪುನೀತ್ ರಾಜ್‌ಕುಮಾ‌ರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ 46ನೇ ವಯಸ್ಸಿನಲ್ಲಿ ನಿಧನರಾಗಿದ್ದರು.