ಬೆಂಗಳೂರು: ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ, ಜಾತಿ ಗಣತಿ, ಮೀಸಲಾತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ಸಭೆ ಕರೆದಿದ್ದಾರೆ.
ಭಾನುವಾರ ಸಂಜೆ ಆರು ಗಂಟೆಗೆ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದೆ. ಈ ನಡುವೆ ಎದುರಾಳಿಯಾಗಿರುವ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕಿಂತ ಮುಂಚಿತವಾಗಿ ಟಿಕೆಟ್ ಘೋಷಣೆ ಮಾಡುವ ಮೂಲಕ ಚುನಾವಣೆಯ ರಣಕಹಳೆ ಮೊಳಗಿಸಿದೆ. ಈ ಮೂಲಕ ಎದುರಾಗಿದ್ದ ಗೊಂದಲಗಳಿಗೆ ತೆರೆ ಎಳೆದಿದೆ. ಆದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷ ಇನ್ನಷ್ಟೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಚನ್ನಪಟ್ಟಣಕ್ಕೆ ಮಾಜಿ ಸಂಸದ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ಅವರು ಅಭ್ಯರ್ಥಿಯಾಗುವುದು ಬಹುತೇಕ ಖಚಿತವೆನಿಸಿದೆ.
ಎನ್ ಡಿ ಡಿಎ ಟಿಕೆಟ್ ಸಿಗಲಿ, ಸಿಗದೆ ಹೋಗಲಿ. ಸಿ.ಪಿ.ಯೋಗೇಶ್ವರ ಬಂಡಾಯವಾಗಿಯಾದರೂ ಇಲ್ಲಿ ಸ್ಪರ್ಧೆ ಬಹುತೇಕ ಖಚಿತ.