ಬೆಳ್ತಂಗಡಿ : ಕಾರ್ತಿಕೋತ್ಸವದ ಲಕ್ಷದೀಪೋತ್ಸವ ಅಂಗವಾಗಿ ಧರ್ಮಸ್ಥಳದಲ್ಲಿನ.29 ರಂದು ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕ್ಷೇತ್ರದ ಅಮೃತವರ್ಷಿಣಿ ಸಭಾ ಭವನದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರಿನ ಕೈಲಾಸ ಆಶ್ರಮ ಮಹಾಸಂಸ್ಥಾನದ ಜಯೇಂದ್ರ ಪುರಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸಂಶೋಧಕ ಡಾ.ಜಿ. ಬಿ.ಹರೀಶ, ನಿವೃತ್ತ ಪ್ರಾಂಶುಪಾಲ ಮಡಂತ್ಯಾರುವಿನ ಡಾ.ಎನ್.ಎಂ.ಜೋಸೆಫ್, ರಾಷ್ಟ್ರೀಯ ಬಸವ ಭೂಷಣ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವಿಜಯಪುರದ ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಭಾಗವಹಿಸಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.