ಬೆಳಗಾವಿ :
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿಯ ಬಿ.ಕೆ. ಮಾಡಲ್ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ “ಚಿಗುರು 2023-24” ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಚಿನ್ನರ ಹಬ್ಬವನ್ನು ನವೆಂಬರ್ 25 ರಂದು ಬೆಳಿಗ್ಗೆ 9.30 ಗಂಟೆಗೆ ಬಿ.ಕೆ. ಮಾಡೆಲ್ ಪ್ರೌಢಶಾಲೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿರುವರು.