Join The Telegram | Join The WhatsApp |
ವೆಲ್ಲಿಂಗ್ಟನ್-
ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸೋತು ಟಿ20 ವಿಶ್ವಕಪ್‌ನಿಂದ ನಿರ್ಗಮಿಸಿದ ಭಾರತ ಮತ್ತು ನ್ಯೂಜಿಲೆಂಡ್ ಶುಕ್ರವಾರ ವೆಲ್ಲಿಂಗ್ಟನ್‌ನಲ್ಲಿ ಮೊದಲನೇ ಟಿ20 ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಸೋಲಿನ ನಿರಾಸೆಯಿಂದ ಹೊರ ಬರಲು ಚಿಂತಿಸುತ್ತಿವೆ. ಆದರೆ, ಮೊದಲನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಆತಂಕ ಎದುರಾಗಿದೆ.
2024ರ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡದಲ್ಲಿ ಸಾಕಷ್ಟು ಬದಲಾವಣೆ ತರಲು ನೋಡುತ್ತಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ವಿಶ್ವಕಪ್‌ನಲ್ಲಿ ಸ್ಥಾನ ಪಡೆಯದ ಪ್ರತಿಭಾವಂತ ಯುವ ಆಟಗಾರರಿಗೆ ಅವಕಾಶ ನೀಡಿದೆ. ನ್ಯೂಜಿಲೆಂಡ್‌ನಂತಹ ಬಲಿಷ್ಠ ತಂಡವನ್ನು ಅವರದೇ ನೆಲದಲ್ಲಿ ಸೋಲಿಸುವುದು ಸುಲಭವಲ್ಲ, ಇದೇ ಭಾರತದ ಯುವ ತಂಡಕ್ಕೆ ಸವಾಲಾಗಿದೆ.
ರೋಹಿತ್ ಅನುಪಸ್ಥಿತಿಯಲ್ಲಿ ಈ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಆಡಿದ ಮೊದಲ ಐಪಿಎಲ್ ಆವೃತ್ತಿಯಲ್ಲೇ ಚಾಂಪಿಯನ್ ಎನಿಸಿಕೊಂಡಿದೆ. ಐಪಿಎಲ್‌ನಲ್ಲಿ ಯಶಸ್ವಿ ನಾಯಕನಾಗಿರುವ ಪಾಂಡ್ಯ ನ್ಯೂಜಿಲೆಂಡ್ ಸರಣಿಯಲ್ಲಿ ಕೂಡ ತಮ್ಮ ಸಾಮರ್ಥ್ಯ ತೋರಿಸಲು ಸಿದ್ಧವಾಗಿದ್ದಾರೆ.
ಭಾರತ-ನ್ಯೂಜಿಲೆಂಡ್ ಮೊದಲನೇ ಟಿ20 ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಪಂದ್ಯ ಆರಂಭವಾಗಲಿದೆ.
Join The Telegram | Join The WhatsApp |