ದೆಹಲಿ :
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ 370 ಕಲಂ ವಿಶೇಷ ಸ್ಥಾನಮಾನದ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯ ಬಗ್ಗೆ ಇಂದು ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರ ನೇತೃತ್ವದಲ್ಲಿ ನ್ಯಾ. ಸಂಜಯ್ ಕಿಶನ್, ಸಂಜೀವ್ ಖನ್ನಾ, ಗವಾಯಿ, ಸೂರ್ಯಕಾಂತ್ ಅವರನ್ನು ಒಳಗೊಂಡ ಪೀಠ ತೀರ್ಪು ಪ್ರಕಟಿಸಲಿದೆ. 2019ರ ಆ.5 ರಂದು ಕೇಂದ್ರದ ಬಿಜೆಪಿ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದನ್ನು ಇಲ್ಲಿ ನೆನಪಿಸಬಹುದು.