ಬೆಳಗಾವಿ: ಬೆಳಗಾವಿ ನಗರದಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಧಾರಾಕಾರವಾಗಿ ಮಳೆ ಸುರಿದಿದೆ.

ಮಳೆಯ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈಗಾಗಲೇ ರಜೆ ಘೋಷಣೆ ಮಾಡಿದೆ. ಬುಧವಾರ ಬೆಳಗ್ಗೆ ಧಾರಾಕಾರವಾಗಿ ಮಳೆ ಸುರಿದಿದೆ. ಇದರ ಪರಿಣಾಮ ಬಳ್ಳಾರಿ ನಾಲಾ ನೀರು ಹರಿದು ಹೋಗುವ ಪ್ರದೇಶದಲ್ಲಿ ಹೊಲ- ಗದ್ದೆಗಳು ಜಲಾವೃತಗೊಂಡಿವೆ. ಬೆಳಗಾವಿ ನಗರದ ಹೊರ ವಲಯದ ಅಂಗಡಿ- ಮುಂಗಟ್ಟುಗಳಲ್ಲಿ ನೀರು ತುಂಬಿಕೊಂಡಿರುವ ದೃಶ್ಯ ಕಂಡು ಬಂದಿದೆ. ಹೋಟೆಲು-ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಅದರಲ್ಲೇ ವ್ಯಾಪಾರ ನಡೆಸುವ ಅನಿವಾರ್ಯತೆ ಸೃಷ್ಟಿಯಾಗಿದೆ.
ವಡಗಾವಿ, ಯಳ್ಳೂರು ರಸ್ತೆ, ಬಸವನ ಕುಡಚಿ ಮುಂತಾದ ಪ್ರದೇಶದಲ್ಲಿ ನೀರು ಆವರಿಸಿಕೊಂಡಿದೆ. ಬಳ್ಳಾರಿ ನಾಲಾ ಪ್ರದೇಶ ಸಂಪೂರ್ಣವಾಗಿ ನೀರು ತುಂಬಿಕೊಂಡಿದೆ.