ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ರೈತರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಟ್ರಾಕ್ಟರ್‌ನಲ್ಲಿ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದಾಗ, ವೇಗವಾಗಿ ಬಂದ ಗೂಡ್ಸ್‌ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟ್ರಾಕ್ಟರ್‌ ಸಂಪೂರ್ಣ ಪುಡಿ ಪುಡಿಯಾಗಿದ್ದು, ಚಕ್ರಗಳು ದೂರಕ್ಕೆ ಹಾರಿದ ಘಟನೆ ಬೆಳಗಾವಿ ಸುವರ್ಣವಿಧಾನಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ (41) ಮೃತರು. ಬೆಳಗಾವಿ ಮಾರ್ಕೆಟ್‌ಗೆ ಕೊತ್ತಂಬರಿ ಸೊಪ್ಪು ಸಾಗಿಸಲು ಟ್ರಾಕ್ಟರ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಗೂಡ್ಸ್‌ ವಾಹನ ಗುದ್ದಿದೆ. ಗುದ್ದಿದ ರಭಸಕ್ಕೆ ಟ್ರಾಕ್ಟರ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಗೂಡ್ಸ್‌ ಲಾರಿ ಮುಂಭಾಗವು ಜಖಂಗೊಂಡಿದೆ. ಹಿರೇಬಾಗೇವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.