
ಉಡುಪಿ/ಮಂಗಳೂರು : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದ್ದು ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ್ ಟಿ.ಕೆ. ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್ ಹೆಚ್. ವಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿಯನ್ನಾಗಿ ನೇಮಕ ಮಾಡಲಾಗಿದೆ.