ಬೆಂಗಳೂರು :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ “ನಂಬಿಕೆ ನಕ್ಷೆ”(ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, “ಹೊಸ ಆಸ್ತಿ ತೆರಿಗೆ ವ್ಯವಸ್ಥೆ” ಹಾಗೂ “ಖಾತಾ ವ್ಯವಸ್ಥೆ”(ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು “ಬಿಬಿಎಂಪಿ ಖಾತಾ” ವಿತರಣೆ ಯೋಜನೆ)ಗೆ
ಡಿಸಿಎಂ ಡಿ ಕೆ ಶಿವಕುಮಾರ್ ರವರು ಇಂದು ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ(ಕೊಠಡಿ ಸಂಖ್ಯೆ 334) ಚಾಲನೆ ನೀಡಿದರು.

ವಸತಿ ಸಚಿವ ಬಿ‌.ಝಡ್ ಜಮೀರ್ ಅಹ್ಮದ್ ಖಾನ್, ಬಿಡಿಎ ಅಧ್ಯಕ್ಷ ಎನ್.ಎ ಹ್ಯಾರೀಸ್, ಶಾಸಕ ರಿಜ್ವಾನ್ ಹರ್ಷದ್, ಮಾಜಿ ಶಾಸಕ ಮಂಜುನಾಥ್, ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.