ಮಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 818 ವಿದ್ಯಾರ್ಥಿಗಳು ತುಳು ಭಾಷಾ ವಿಷಯದಲ್ಲಿ ತೇರ್ಗಡೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯ ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ತುಳು ಭಾಷೆಯನ್ನು ಆಯ್ದಕೊಂಡು 847 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 818 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 317 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದಿದ್ದಾರೆ.