Join The Telegram | Join The WhatsApp |
ನವದೆಹಲಿ:
ಸೆಪ್ಟೆಂಬರ್ 26 ಮತ್ತು ಅಕ್ಟೋಬರ್ 25ರ ನಡುವೆ ಭಾರತದಲ್ಲಿ ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ಒಪ್ಪಿಗೆ ಯಿಲ್ಲದ ನಗ್ನತೆಯನ್ನು ಉತ್ತೇಜಿಸುವ 44,611 ಖಾತೆಗಳನ್ನು ಟ್ವಿಟರ್ ನಿಷೇಧಿಸಿದೆ. ಆಗಸ್ಟ್ 26 ಮತ್ತು ಸೆಪ್ಟೆಂಬರ್ 25 ರ ನಡುವಿನ ಹಿಂದಿನ ಅವಧಿಯಲ್ಲಿ ಕಂಪನಿಯು ಭಾರತದಲ್ಲಿ ಇಂತಹ 52,141 ಖಾತೆಗಳನ್ನು ನಿಷೇಧಿಸಿತ್ತು. ಎಲಾನ್ ಮಸ್ಕ್ ನೇತೃತ್ವದಲ್ಲಿ ಟ್ವಿಟರ್ ಈ ಕ್ರಮವನ್ನು ಕೈಗೊಂಡಿದ್ದು, ದೇಶದಲ್ಲಿ ತನ್ನ ವೇದಿಕೆಯಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದ್ದ 4,014 ಖಾತೆಗಳನ್ನು ತೆಗೆದುಹಾಕಿದೆ.
2021ರ ಹೊಸ ಐಟಿ ನಿಯಮಗಳಿಗೆ ಅನುಸಾರವಾಗಿ ಟ್ವಿಟರ್ ತನ್ನ ಮಾಸಿಕ ವರದಿಯಲ್ಲಿ, ತನ್ನ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳ ಮೂಲಕ ಅದೇ ವೇಳೆಯಲ್ಲಿ ದೇಶದ ಬಳಕೆದಾರರಿಂದ 582 ದೂರುಗಳನ್ನು ಸ್ವೀಕರಿಸಿದೆ ಮತ್ತು ಕೇವಲ 20 ಯುಆರ್ಎಲ್ಗಳ ಮೇಲೆ ಕ್ರಮ ಕೈಗೊಂಡಿರುವುದಾಗಿ ಹೇಳಿದೆ. ಈ ಹಿಂದೆ ಆಗಸ್ಟ್ 26 ಮತ್ತು ಸೆಪ್ಟೆಂಬರ್ 25ರ ಅವಧಿಯಲ್ಲಿಯೂ ಬಳಕೆದಾರರಿಂದ 157 ದೂರುಗಳನ್ನು ಸ್ವೀಕರಿಸಲಾಗಿತ್ತು ಮತ್ತು 129 ಯುಆರ್ ಎಲ್ ಗಳ ಮೇಲೆ ಕ್ರಮ ಕೈಗೊಳ್ಳಲಾಗಿತ್ತು.
Join The Telegram | Join The WhatsApp |