ಬೆಳಗಾವಿ : ಖಾನಾಪುರ ರೈಲ್ವೆ ಬ್ರಿಜ್ ಬಳಿ ಕಾರಿನ ಟೈಯರ್ ಬ್ಲಾಸ್ಟ್ ಆಗಿ ನಡೆದ ಅಪಘಾತದಲ್ಲಿ ಇಂದು ಇಬ್ಬರು ಮೃತಪಟ್ಟಿದ್ದಾರೆ.

ಕಾರಿನ ಹಿಂಬದಿ ಟೈಯರ್ ಬ್ಲಾಸ್ಟ್ ಆಗಿ ಬೈಕ್ ಗೆ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಒಬ್ಬ ಮತ್ತು ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.