ಬೆಳಗಾವಿ : ಸುಳೇಭಾವಿ ಗ್ರಾಮದ ವಾಲ್ಮೀಕಿ ಗುಡಿಯಲ್ಲಿ ಮಹಿಳಾ ಸಂಘದ ಸಭೆ ಮುಗಿಸಿ ಗುಡಿ ಸ್ವಚ್ಛಗೊಳಿಸಿದ್ದರು. ಸ್ವಚ್ಛಗೊಳಿಸಿದ್ದ ನೀರಿನಲ್ಲಿ ವಿದ್ಯುತ್ ತಂತಿ ಕಟ್ಟಾಗಿ ಕೆಳಗೆ ಬಿದ್ದಿದೆ. ಆಗ ಕಬ್ಬಿಣದ ಗೇಟ್ ಹಾಕುವಾಗ ಗೇಟ್ ಗೆ ತಾಗಿದ್ದ ವಿದ್ಯುತ್ ತಂತಿ ಸ್ಪರ್ಶಗೊಂಡು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಸುಳೇಭಾವಿ ಗ್ರಾಮದ ಸವಿತಾ ಫಕೀರಪ್ಪ ಒಂಟಿ(34) ಹಾಗೂ ಕಲಾವತಿ ಮಾರುತಿ ಬಿದರವಾಡಿ(41)ಮೃತಪಟ್ಟಿದ್ದಾರೆ. ವಿದ್ಯುತ್ ತಗುಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಪಿಎಸ್ಐ ಮಂಜುನಾಥ್ ನಾಯಿಕ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಕೊಂಡಿದ್ದಾರೆ.