Join The Telegram | Join The WhatsApp |
ಬೆಳಗಾವಿ :
ತ್ಯಾಗವೀರ ಸಿರಸಂಗಿ ಲಿಂಗರಾಜರ 162 ನೇ ಜಯಂತಿ ಉತ್ಸವವು ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನಲ್ಲಿ ಜನವರಿ 10 ರಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಭಾಗೃಹದಲ್ಲಿ ಜರುಗಲಿದೆ.
ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ನಾಗನೂರು ರುದ್ರಾಕ್ಷಿಮಠದ ಪರಮಪೂಜ್ಯ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ಜಯಂತಿ ಸಮಿತಿಯು ಅವರ ಅಮೃತ ಮಹೋತ್ಸವ ನಿಮಿತ್ತ ಗೌರವ ಸನ್ಮಾನವನ್ನು ಆಯೋಜಿಸಿದೆ.
ಕಿತ್ತೂರು ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮತ್ತಿಹಳ್ಳಿ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಬೈಲಹೊಂಗಲ ಮತಕ್ಷೇತ್ರದ ಶಾಸಕ ಹಾಗೂ ಕೆಎಲ್‌ಇ ಅಧ್ಯಕ್ಷ ಮಹಾಂತೇಶ ಕೌಜಲಗಿ ವಹಿಸಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಬಸವರಾಜ ತಟವಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join The Telegram | Join The WhatsApp |