ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದ ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ಇದುವರೆಗೆ ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಪ್ರತಿನಿಧಿಸುತ್ತಿದ್ದರು.
ಉಡುಪಿ ಲೋಕಸಭಾ ಮತಕ್ಷೇತ್ರದಿಂದ ಈ ಬಾರಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಸರಳ ಸಜ್ಜನ ಜನನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ಸಿಕ್ಕಿದೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಇದೀಗ ಅವರನ್ನು ಒಕ್ಕಲಿಗ ಪ್ರಾಬಲ್ಯದ ಬೆಂಗಳೂರಿಗೆ ರವಾನಿಸಿದೆ. ಅವರು ಈ ಹಿಂದೆ ಯಶವಂತಪುರ ವಿಧಾನಸಭಾ ಮತಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.