ಉಡುಪಿ : ಉಡುಪಿ -ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸೋಮವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಯಾವುದೇ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿಲ್ಲ. ಆದ್ದರಿಂದ 10 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆ. ಜಯಪ್ರಕಾಶ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಕೆ.ಟಿ. ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾದ ಸುಪ್ರೀತ್ ಕುಮಾರ್‌ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾದ ಶಬರೀಶ್ ಆರ್., ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾದ ಎಲ್. ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾದ ಎಂ.ಕೆ. ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಸಚಿನ್ ಬಿ.ಕೆ. ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಸುಧೀರ್‌ ಕಾಂಚನ್ ಹಾಗೂ ವಿಜಯಕುಮಾರ್‌ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು.